ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2024 ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ದಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ ದಿನಾಂಕ: 04.10.2024 ರಿಂದ 07.10.2024 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ. ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಾಚಿತ್ರ, ಅನ್ವಯ ಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳಿರುತ್ತದೆ. ಸಾಂಪ್ರದಾಯಕ ಚಿತ್ರಕಲೆ. ಸಾಂಪ್ರದಾಯಕ ಶಿಲ್ಪಕಲೆ, ಕರಕುಶಲ ಕಲೆ/ಇನ್ಲೇ ವಿಭಾಗಗಳಲ್ಲಿ ಹವ್ಯಾಸಿ ವಿಭಾಗವಿರುವುದಿಲ್ಲ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಕಲಾಕೃತಿಗಳನ್ನು ದಿನಾಂಕ 17-09-2024 ರಿಂದ 30-09-2024 ರೊಳಗೆ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು [ಕಾವಾ], ಸಿದ್ದಾರ್ಥನಗರ, ಮೈಸೂರು-570011, ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸುವುದು. ಕಲಾಕೃತಿಗಳನ್ನು ಸಲ್ಲಿಸುವ ಕಲಾವಿದರು ಸಂಪೂರ್ಣ ವಿವರವನ್ನು ಸ್ವಯಂ ದೃಢೀಕರಣದೊಂದಿಗೆ ಉಪಸಮಿತಿಗೆ ತಲುಪಿಸುವಂತೆ ಕೋರಲಾಗಿದೆ.
ಅರ್ಜಿ ನಮೂನೆಯನ್ನು ಕೆಳಗೆ ನಮೂದಿಸಿರುವ ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ: https://cavamysore.karnataka.gov.in & https://mysore.nic.in ಹೆಚ್ಚಿನ ವಿವರಗಳಿಗಾಗಿ ಶ್ರೀ ಚಂದ್ರಶೇಖರ ಎ ಪಿ ಮೊಬೈಲ್ ಸಂಖ್ಯೆ 9844595568 / ಶ್ರೀ ರವಿಮೂರ್ತಿ.ಕೆ ಮೊಬೈಲ್ ಸಂಖ್ಯೆ: 9844082579 ರವರನ್ನು ಸಂರ್ಪಕಿಸಬಹುದಾಗಿರುತ್ತದೆ.
–DK